Log in
  • ಮುಖಪುಟ
  • ಬೆಂಗಳೂರಿನಲ್ಲಿ ದೂತಾವಾಸ ಕಚೇರಿ ಸ್ಥಾಪನೆಗೆ ರಾಜ್ಯ ಬಿಜೆಪಿ ಮನವಿ, ಜೈಶಂಕರ್ ಸಕಾರಾತ್ಮಕ ಸ್ಪಂದನೆ

ಬೆಂಗಳೂರಿನಲ್ಲಿ ದೂತಾವಾಸ ಕಚೇರಿ ಸ್ಥಾಪನೆಗೆ ರಾಜ್ಯ ಬಿಜೆಪಿ ಮನವಿ, ಜೈಶಂಕರ್ ಸಕಾರಾತ್ಮಕ ಸ್ಪಂದನೆ

ಬೆಂಗಳೂರಿನಲ್ಲಿ ಅಮೆರಿಕದ ದೂತಾವಾಸ ಕಚೇರಿ ಸ್ಥಾಪನೆ ಕುರಿತು ರಾಜ್ಯ ಬಿಜೆಪಿ ಮುಖಂಡರು ಮಾಡಿದ ಮನವಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಕುರಿತು ಅಮೆರಿಕದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹಾಗೂ ರಾಜ್ಯ ಬಿಜೆಪಿ ಮುಖಂಡ ಎ.ಎಚ್.ಆನಂದ್ ಅವರು ಜುಲೈ 10ರಂದು ಜೈಶಂಕರ್ ಅವರಿಗೆ ಪತ್ರ ಬರೆದಿದ್ದರು. ಪ್ರತಿ ದಿನ ದಕ್ಷಿಣ ಕರ್ನಾಟಕದ 450 ಜನರು ವೀಸಾಗೆ ಅರ್ಜಿ ಹಾಕಲು ಚೆನ್ನೈಗೆ ಹೋಗು ಪರಿಸ್ಥಿತಿ ಇದೆ. ಹಾಗಾಗಿ ಬೆಂಗಳೂರಿನಲ್ಲಿ ಅಮೆರಿಕದ ರಾಯಭಾರ ಕಚೇರಿ ಸ್ಥಾಪನೆ ಮಾಡಿದರೆ, ಇಡೀ ರಾಜ್ಯದ ಜನರು ವೀಸಾಗೆ ಅರ್ಜಿ ಹಾಕಲು ಸಹಕಾರಿಯಾಗುತ್ತದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಜೈಶಂಕರ್ ಅವರು, ಬೆಂಗಳೂರು ಹಾಗೂ ಅಮೆರಿಕವು ತಾಂತ್ರಿಕ, ವೈಜ್ಞಾನಿಕ ಹಾಗೂ ವ್ಯವಹಾರಿಕ ಸಂಬಂಧ ಹೊಂದಿದ್ದು, ಸಿಲಿಕಾನ್ ಸಿಟಿಯಲ್ಲಿ ಅಮೆರಿಕದ ರಾಯಭಾರಿ ಕಚೇರಿ ಸ್ಥಾಪನೆ ಮಾಡುವ ಕುರಿತು ಅಮೆರಿಕದ ಗಮನಕ್ಕೆ ತರಲಾಗುವುದು ಎಂದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

This forum is empty.


Copyright © 2019-20 Vikrama. All rights reserved. 

Powered by Wild Apricot Membership Software