Log in
  • ಮುಖಪುಟ
  • ರಾಜಸ್ಥಾನದಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಪ್ರತಿಮೆ ಧ್ವಂಸ, ವಿಕೃತಿ ಮೆರೆದ ದುಷ್ಕರ್ಮಿಗಳು

ರಾಜಸ್ಥಾನದಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಪ್ರತಿಮೆ ಧ್ವಂಸ, ವಿಕೃತಿ ಮೆರೆದ ದುಷ್ಕರ್ಮಿಗಳು

ರಾಜಸ್ಥಾನದ ಬಿಲ್ವಾರ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಹಲವು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದು, ಜನಸಂಘದ ಸಂಸ್ಥಾಪಕ, ಜಮ್ಮು-ಕಾಶ್ಮೀರಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಶ್ಯಾಮ್ ಪ್ರಸಾದ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಜಮ್ಮು-ಕಾಶ್ಮೀರದ 370ನೇ ವಿಧಿ ರದ್ದುಗೊಳಿಸಿದ್ದು ಹಾಗೂ ಈ ವಿಧಿಯನ್ನು ಶ್ಯಾಮ್ ಪ್ರಸಾದ್ ಅವರೇ ವಿರೋಧಿಸಿದ ಕಾರಣ ಇಸ್ಲಾಮಿಕ್ ಮೂಲಭೂತವಾದಿಗಳೇ ದುಷ್ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.

ಭಾನುವಾರ ತಡರಾತ್ರಿಯೇ ಮುಖರ್ಜಿಯವರ ಪ್ರತಿಮೆ ಧ್ವಂಸಗೊಳಿಸಿದ್ದು, ಈಗಾಗಲೇ ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಇಸ್ಲಾಮಿಕ್ ಮೂಲಭೂತವಾದಿಗಳೇ ಇಂತಹ ಕೃತ್ಯ ಎಸಗಿರಬಹುದು. ಕಾಶ್ಮೀರಕ್ಕೆ ನೀಡಿದ್ದ ವಿಧಿಯನ್ನು ಮೊದಲು ಇವರೇ ವಿರೋಧಿಸಿದ್ದರಿಂದ ಸೈದ್ಧಾಂತಿಕ ಮೂಲಭೂತವಾದ ಮೆರೆದಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರವು ಇಂತಹ ಕುತ್ಸಿತ ಮನಸ್ಸಿನವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ.

This forum is empty.


Copyright © 2019-20 Vikrama. All rights reserved. 

Powered by Wild Apricot Membership Software