Log in
  • ಮುಖಪುಟ
  • ಮಧ್ಯಪ್ರದೇಶದಲ್ಲಿ ನಿಂತ ನೀರಾದ ಕಾಂಗ್ರೆಸ್ ಸರ್ಕಾರ: ಸೆಪ್ಟೆಂಬರ್ 11 ರಂದು ರಾಜ್ಯಾದ್ಯಂತ ಬಿಜೆಪಿ ಅಭಿಯಾನ
ಮಧ್ಯಪ್ರದೇಶದಲ್ಲಿ ನಿಂತ ನೀರಾದ ಕಾಂಗ್ರೆಸ್ ಸರ್ಕಾರ: ಸೆಪ್ಟೆಂಬರ್ 11 ರಂದು ರಾಜ್ಯಾದ್ಯಂತ ಬಿಜೆಪಿ ಅಭಿಯಾನ

ಮಧ್ಯಪ್ರದೇಶದಲ್ಲಿ ಸಿಎಂ ಕಮಲನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ 9 ತಿಂಗಳು ಕಳೆದರೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಮಾತ್ರ ಕಾಣುತ್ತಿಲ್ಲ. ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರ ನಿಂತ ನೀರಾಗಿದೆ ಎಂದು ಆರೋಪಿಸಿ ಮಧ್ಯ ಪ್ರದೇಶ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದ್ದು, ಸೆಪ್ಟೆಂಬರ್ 11 ರಂದು ಮಧ್ಯ ಪ್ರದೇಶದಲ್ಲಿ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ, ರಾಜ್ಯಾದ್ಯಂತ ಬೃಹತ್ ಅಭಿಯಾನ ಹಮ್ಮಿಕೊಂಡಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ 9 ತಿಂಗಳು ಕಳೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಸಿಎಂ ಕಮಲನಾಥ್ ನಡುವಿನ ರಾಜಕೀಯ ಒಳಜಗಳದಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ. ಸೆಪ್ಟೆಂಬರ್ 11 ರಂದು ಪ್ರತಿ ಜಿಲ್ಲಾ,ನಗರ ಕೇಂದ್ರದಲ್ಲೂ ಅಭಿಯಾನ ನಡೆಸಿ, ಸರ್ಕಾರದ ವೈಫಲಗಳನ್ನು ಜನರಿಗೆ ಬೈಕ್ ರ್ಯಾಲಿ ಮೂಲಕ ಮನವರಿಕೆ ಮಾಡಿಕೊಡಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ರಾಕೇಶ್ ಸಿಂಗ್ ತಿಳಿಸಿದ್ದಾರೆ.

ಸೆಪ್ಟೆಂಬರ್ 11 ರಂದು ರಾಜ್ಯಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ಅಭಿಯಾನದಲ್ಲಿ ಮಾಜಿ ಸಿಎಂ ಶಿವರಾಜ್ ಸಿಂಗ್, ಪ್ರತಿಪಕ್ಷ ನಾಯಕ ಗೋಪಾಲ್ ಭಾರ್ಗವ್, ಸಂಸದೆ ಸಾದ್ವಿಪ್ರಜ್ಞಾ ಸಿಂಗ್ ಠಾಕೂರ್ ಭಾಗವಹಿಸಲಿದ್ದಾರೆ. ಈ ಅಭಿಯಾನದಲ್ಲಿ ಭಾಗವಹಿಸಿಸುವಂತೆ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ರಾಕೇಶ್ ಸಿಂಗ್ ಕರೆ ಕೊಟ್ಟಿದ್ದಾರೆ.

This forum is empty.


Copyright © 2019-20 Vikrama. All rights reserved. 

Powered by Wild Apricot Membership Software