Log in
  • ಮುಖಪುಟ
  • ರೈತರ ಅನುಕೂಲಕ್ಕಾಗಿ ಕಿಸಾನ್ ಮಾನ್ ಧನ್ ಯೋಜನೆಗೆ ಮೋದಿ ಸೆ.12ರಂದು ಚಾಲನೆ

ರೈತರ ಅನುಕೂಲಕ್ಕಾಗಿ ಕಿಸಾನ್ ಮಾನ್ ಧನ್ ಯೋಜನೆಗೆ ಮೋದಿ ಸೆ.12ರಂದು ಚಾಲನೆ


ರೈತರ ಜೀವನಾಧಾರಕ್ಕೆ ಭದ್ರತೆ ಒದಗಿಸುವ ಕಿಸಾನ್ ಮಾನ್ ಧನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 12 ರಂದು ಜಾರ್ಖಂಡ್ ನ ರಾಂಚಿಯಲ್ಲಿ ಚಾಲನೆ ನೀಡಲಿದ್ದಾರೆ.

60 ವರ್ಷ ದಾಟಿದವರಿಗೆ ತಿಂಗಳಿಗೆ ಕನಿಷ್ಠ 3000 ರೂ.ಗಳ ಪಿಂಚಣಿ ನೀಡುವ ಮೂಲಕ ಈ ಯೋಜನೆ 5 ಕೋಟಿ ಸಣ್ಣ ಮತ್ತು ಅತಿ ಸಣ್ಣ ರೈತರ ಜೀವನಕ್ಕೆ ಭದ್ರತೆ ಒದಗಿಸುತ್ತದೆ.

ಮುಂದಿನ ಮೂರು ವರ್ಷಗಳವರೆಗೆ ಈ ಯೋಜನೆಗೆ 10,774 ಕೋಟಿ ರೂ. ವಿತರಣೆ ಮಾಡಲಿದೆ. ಪ್ರಸ್ತುತ 18 ರಿಂದ 40 ವರ್ಷದೊಳಗಿನ ಎಲ್ಲ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಅಲ್ಲದೆ, ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳಲ್ಲಿನ ಎಸ್ಟಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಪ್ರಾಥಮಿಕ, ಪ್ರೌಢ ಮತ್ತು ಹಿರಿಯ ಮಾಧ್ಯಮಿಕ ಶಿಕ್ಷಣವನ್ನು ಒದಗಿಸಲು ಪ್ರಧಾನಿ ನರೇಂದ್ರ ಮೋದಿ 400 ಮಾದರಿ ವಸತಿ ಶಾಲೆಗಳನ್ನು ಉದ್ಘಾಟಿಸಲಿದ್ದಾರೆ.

This forum is empty.


Copyright © 2019-20 Vikrama. All rights reserved. 

Powered by Wild Apricot Membership Software